ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶನಿವಾರ (ಜ. 4) ಮೈ ಪ್ಲಾನೆಟ್ ಮೈ ಪ್ರೈಡ್ ” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು.
ಆಸ್ಪತ್ರೆಯ ಆವರಣದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮಿಯಾವಾಕಿ ತಂತ್ರ ಬಳಸಿಕೊಂಡು ಮರು ಅರಣ್ಯೀಕರಣದ ಕೆಲಸಕ್ಕಾಗಿ “ದಿ ಗ್ರೀನ್ ಹೀರೋ ಆಫ್ ಇಂಡಿಯಾ” ಎಂದೇ ಹೆಸರುವಾಸಿಯಾಗಿರುವ ಡಾ| ರಾಧಾಕೃಷ್ಣ ನಾಯರ್ ವಿಶೇಷ ಉಪನ್ಯಾಸ ನೀಡಿ, ನಮ್ಮ ಭೂಮಿ ನಮ್ಮ ಅಭಿಮಾನ ಅದನ್ನು ಸಂರಕ್ಷಿಸಲು ಎಲ್ಲರೂ ಒಂದಾಗಿ ಹೋರಾಡೋಣ. ಮಾನವರಾದ ನಾವು ಭೂಮಿಯನ್ನು ನಾಶಗೊಳಿಸುತ್ತಿದ್ದೇವೆ. ಹಾಗಾಗಿ ಭೂಮಿಯನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ. ಯೂಸ್ ಆಂಡ್ ಥ್ರೋ ವಸ್ತುಗಳನ್ನು ಆದಷ್ಟು ಕಡಿಮೆ ಬಳಸಿ. ಮರು ಬಳಕೆಯ ಉತ್ಪನ್ನಕ್ಕೆ ಹೆಚ್ಚಿನ ಒತ್ತು ನೀಡಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ವಹಿಸಿದ್ದರು. ಕಾಲೇಜಿನ ಡೀನ್ ಡಾ| ನೀಲಾಂಬಿಕೈ ನಟರಾಜನ್, ಆರ್ಥೋಪೆಡಿಕ್ ವಿಭಾಗದ ಸಹ ಪ್ರಾಧ್ಯಾಪಕರು ಹಾಗೂ ಇಕೋ ಕ್ಲಬ್ ವಿಭಾಗದ ಸಂಚಾಲಕ ಡಾ| ರೋಷನ್ ಎಸ್ ಡಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಪ್ರದೀಶ ಕಾಮತ್ ಸ್ವಾಗತಿಸಿದರು, ಅಭಿನಂದನ್ ಟಿ ಎ ಹಾಗೂ ಹರ್ಷಿತಾ ಜೆ ನಿರೂಪಿಸಿದರು, ಚಿರಾಗ್ ಗೌಡ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.