ನ್ಯೂಸ್ ನಾಟೌಟ್:ಮಂಗಳೂರು ವಿಶ್ವವಿದ್ಯಾಲಯ ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮತದಾನದ ಕುರಿತಾದ ಮಾಹಿತಿ ಕಾರ್ಯಕ್ರಮವನ್ನು ಜ 25 ರಂದು ಹಮ್ಮಿಕೊಳ್ಳಲಾಯಿತು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ರುದ್ರ ಕುಮಾರ್ ಎಂ.ಎಂ, ಎನ್.ಎಸ್.ಎಸ್ ಘಟಕಾಧಿಕಾರಿ ಚಿತ್ರಲೇಖ ಕೆ. ಎಸ್ ಹಾಗೂ ಹರಿಪ್ರಸಾದ್ ಅತ್ಯಾಡಿ, ಎನ್.ಎಸ್.ಎಸ್ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುನಿಟ್ 2 ಎನ್.ಎಸ್.ಎಸ್ ಅಧಿಕಾರಿಯಾದ ಹರಿಪ್ರಸಾದ್ ಅತ್ಯಾಡಿ ಪ್ರತಿಜ್ಞಾ ವಿಧಿ ಭೋದಿಸಿದರು. ವಿದ್ಯಾರ್ಥಿನಿ ಹವ್ಯಶ್ರೀ ಧನ್ಯವಾದಗೈದರು. ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.