2 ಮಹಿಳಾ ನಕ್ಸಲರು ಸೇರಿದಂತೆ ಎನ್ ​ಕೌಂಟರ್ ​ನಲ್ಲಿ 12 ನಕ್ಸಲರ ಹತ್ಯೆ..! ಆಟೋ-ಲೋಡಿಂಗ್ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಬಂದೂಕುಗಳು, ಮದ್ದುಗುಂಡುಗಳು ವಶಕ್ಕೆ..!

ನ್ಯೂಸ್ ನಾಟೌಟ್: ಛತ್ತೀಸ್‌ ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ(ಜ.21) ತಿಳಿಸಿದ್ದಾರೆ. ಸೋಮವಾರ ಕೂಡ ಕಾರ್ಯಾಚರಣೆ ನಡೆದಿತ್ತು. ಸೋಮವಾರದ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಒಬ್ಬ ಕೋಬ್ರಾ ಜವಾನ್ ಗಾಯಗೊಂಡಿದ್ದರು. ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಛತ್ತೀಸ್‌ಗಢದ ಕೋಬ್ರಾ ಮತ್ತು ಒಡಿಶಾದ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಯ ಭದ್ರತಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಕುಳರಿಘಾಟ್ ಮೀಸಲು ಅರಣ್ಯದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ ಜನವರಿ 19 ರ ರಾತ್ರಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಎನ್‌ ಕೌಂಟರ್ ನಡೆದ ಸ್ಥಳದಿಂದ ಆಟೋ-ಲೋಡಿಂಗ್ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಬಂದೂಕುಗಳು, ಮದ್ದುಗುಂಡುಗಳು ಮತ್ತು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾವೋವಾದಿಗಳ ಸಾವುನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ. Click