ನ್ಯೂಸ್ ನಾಟೌಟ್ : ಮದುವೆಯಾಗಿ ೧೨ ವರ್ಷಗಳ ಬಳಿಕ ಮಗುವಿಗೆ ಜನ್ಮ ನೀಡಿದ ಬಳಿಕ ದುರಂತ ಸಾವನ್ನಪ್ಪಿದ ಘಟನೆ ಬಗ್ಗೆ ವರದಿಯಾಗಿದೆ. ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ಬೆಳಕಿಗೆ ಬಂದಿದ್ದು, ಅಂಜಲಿ ಪಾಟೀಲ್ ಸಾವನ್ನಪ್ಪಿದ ಬಾಣಂತಿ ಎಂದು ತಿಳಿದು ಬಂದಿದೆ.
ಮದುವೆಯಾಗಿ ಹನ್ನೆರಡು ವರ್ಷದ ಬಳಿಕ ಗರ್ಭವತಿಯಾಗಿದ್ದ ಅಂಜಲಿ ಮೊದಲ ಮಗುವಿನ ಆಗಮನಕ್ಕಾಗಿ ಕಾತುರದಲ್ಲಿದ್ದರು. ಎಲ್ಲಾ ತಾಯಂದಿರ ಹಾಗೆ ತನ್ನ ಮಗುವಿನ ಬಗ್ಗೆ ಸಾವಿರ ಕನಸುಗಳನ್ನು ಕಟ್ಟಿಕೊಂಡಿದ್ದ ಅಂಜಲಿಗೆ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಗಾಗಿ ಸೋಮವಾರ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹೆರಿಗೆಯಾದ ಸಂದರ್ಭದಲ್ಲಿ ಕ್ಷೇಮವಾಗಿಯೇ ಇದ್ದ ಅಂಜಲಿ ಮಧ್ಯರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವೈದ್ಯರು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ ಎಂದು ಹೇಳಿದರೆ ವೈದ್ಯರ ನಿರ್ಲಕ್ಷ್ಯದಿಂದಲೇ ಅಂಜಲಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಎಪಿಎಂಸಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.