- +91 73497 60202
- [email protected]
- January 6, 2025 2:39 PM
ಪಾರ್ಟಿ ಮೂಡಲ್ಲಿದ್ದ ಆತನಿಗೆ ಏಕಾಏಕಿ ಚಾಕು ಇರಿದ ಪ್ರೇಯಸಿ..! ಯುವಕನಿಗೆ ಐಸಿಯುನಲ್ಲಿ ಚಿಕಿತ್ಸೆ..!
ನ್ಯೂಸ್ ನಾಟೌಟ್ : ಪ್ರಿಯತಮೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಜಗಳ ಮಾಡಿ, ಏಕಾಏಕಿ ಚಾಕು ಇರಿದ ಘಟನೆ ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಬಳಿ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನು ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ (25) ಎಂದು ಗುರುತಿಸಲಾಗಿದೆ. ಚಾಕು ಇರಿದ ಯುವತಿಯನ್ನು ಭವಾನಿ ಎಂದು ಗುರುತಿಸಲಾಗಿದೆ. ಇಬ್ಬರೂ ಒಂದೇ ಗ್ರಾಮದವರಾಗಿದ್ದಾರೆ. ಮನುಕುಮಾರ್ ಹಾಗೂ ಭವಾನಿ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದರು. ಪರಸ್ಪರ ಪ್ರೀತಿಸುತ್ತಿದ್ದರು, ಕೆಲ ದಿನಗಳಿಂದ ಇಬ್ಬರು ದೂರವಾಗಿದ್ದರು ಎಂದು ತಿಳಿದು ಬಂದಿದೆ. ಮಂಗಳವಾರ(ಡಿ.31) ರಾತ್ರಿ ಹೊಸ ವರ್ಷಾಚರಣೆಗೆ ಸ್ನೇಹಿತರ ಜೊತೆ ಖಾಸಗಿ ಹೋಟೆಲ್ ಗೆ ಮನುಕುಮಾರ್ ಬಂದಿದ್ದ. ಈ ವೇಳೆ ಯುವತಿ ಪದೇ ಪದೇ ಮನುಕುಮಾರ್ ಗೆ ಕರೆ ಮಾಡಿದ್ದಾಳೆ. ಬಳಿಕ ತಡರಾತ್ರಿ 12:30ರ ವೇಳೆಗೆ ಹೋಟೆಲ್ ಬಳಿ ಬಂದ ಭವಾನಿ, ಅಲ್ಲೇ ಬಿದ್ದಿದ್ದ ಪಾಸ್ ಹಾಕಿಕೊಂಡು ಗೇಟ್ ಒಳಗೆ ಪ್ರವೇಶಿಸಿದ್ದಾಳೆ. ಅಷ್ಟರಲ್ಲಿ ಗೇಟ್ ಬಳಿ ಮನುಕುಮಾರ್ ಬಂದಿದ್ದಾನೆ. ಆಗ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಈ ವೇಳೆ ಸ್ನೇಹಿತರು ಜಗಳ ಬಿಡಿಸಲು ಮುಂದಾಗಿದ್ದಾರೆ. ಅಷ್ಟರಲ್ಲೇ ಯುವತಿ ಆತನಿಗೆ ಏಕಾಏಕಿ ಚಾಕು ಇರಿದಿದ್ದಾಳೆ. ಗಾಯಗೊಂಡಿರುವ ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ