ನ್ಯೂಸ್ ನಾಟೌಟ್: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು(ಜ.2) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.
ಬಿಎಂಟಿಸಿ, ಕೆಎಸ್ಆರ್ಟಿಸಿ, ಕೆಡಬ್ಲ್ಯುಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಈ ಹಿಂದೆ ಶೇ. 40 ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಡೀಸೆಲ್ ಬೆಲೆಯ ಏರಿಕೆಯನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸಲಿದೆ.