ಓಯೋ ರೂಮ್ ಗಳಿಗೆ ಇನ್ನು ಮುಂದೆ ಹೊಸ ನಿಯಮ..! ಅವಿವಾಹಿತ ಜೋಡಿಗೆ ಹೋಟೆಲ್‌ ಪ್ರವೇಶ ನಿರ್ಬಂಧ..!

ನ್ಯೂಸ್ ನಾಟೌಟ್ : ಓಯೋ ಹೋಟೆಲ್‌ (OYO Hotel) ಬುಕ್ಕಿಂಗ್‌ ಕಂಪನಿ ಚೆಕ್‌ ಇನ್‌ ಗೆ ಸಂಬಂಧಿಸಿದಂತೆ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ಅದರಂತೆ ಇನ್ಮುಂದೆ ಅವಿವಾಹಿತ ಪುರುಷ – ಮಹಿಳಾ ಜೋಡಿಗೆ ಹೋಟೆಲ್‌ ಗಳಲ್ಲಿ ಅನುಮತಿ ಇರುವುದಿಲ್ಲ ಎಂದು ಹೇಳಿದೆ. ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಓಯೋ ಕೂಡ ಒಂದಾಗಿದೆ. ದೇಶದ ಎಲ್ಲಾ ನಗರಗಳಲ್ಲಿಯೂ ತನ್ನ ಹೋಟಲ್‌ ಬುಕ್ಕಿಂಗ್‌ ಜಾಲವನ್ನು ವಿಸ್ತರಣೆ ಮಾಡಿಕೊಂಡಿದೆ. ಕಡಿಮೆ ದರ, ಗುಣಮಟ್ಟದ ಸೇವೆ, ದೊಡ್ಡ ಜಾಲದಿಂದ ಈ ಓಯೋ ಹೋಟೆಲ್‌ ಗಳು ಹೆಸರುವಾಸಿಯಾಗಿವೆ. ಅದರಲ್ಲೂ ಅವಿವಾಹಿತರಿಗೆ ಹೋಟೆಲ್‌ ಚೆಕ್‌ ಇನ್‌ ಗೆ ಅವಕಾಶ ನೀಡುವ ಕಾರಣಕ್ಕೆ ಈ ಹೋಟೆಲ್‌ ಗ್ರಾಹಕರ ನೆಚ್ಚಿನ ಆಯ್ಕೆಯಾಗಿತ್ತು. ಇದೀಗ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮ ಜಾರಿಗೊಳಿಸಿದೆ. ಓಯೋನ ಈ ಹೊಸ ನಿಯಮವು ಮೀರತ್‌ ನಲ್ಲಿ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ದೇಶದ ಎಲ್ಲಾ ನಗರಗಳಲ್ಲಿಯೂ ಜಾರಿಗೆ ತರಲಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಹಲವು ದೂರುಗಳು ಜನಸಾಮಾನ್ಯರಿಂದ ಬಂದಿವೆ. ಹಲವು ನಗರಗಳ ನಿವಾಸಿಗಳು ಅವಿವಾಹಿತರಿಗೆ ಚೆಕ್-ಇನ್ ಮಾಡಲು ಅವಕಾಶ ನೀಡದಂತೆ ಅರ್ಜಿ ಸಲ್ಲಿಸಿದ್ದರು. ಹೀಗೆ ಹಲವು ವಿಚಾರವಾಗಿ ದೂರು ಸ್ವೀಕರಿಸಿದ್ದ ಓಯೋ ಹೊಸ ನಿಯಮ ಜಾರಿಗೆ ತಂದಿದೆ ಎನ್ನಲಾಗಿದೆ. ಹೊಸ ನಿಯಮದ ಪ್ರಕಾರ, ಹೊಟೇಲ್‌ ಗೆ ಬರುವ ಜೋಡಿಗಳು ಕಡ್ಡಾಯವಾಗಿ ತಮ್ಮ ನಡುವಿನ ಸಂಬಂಧದ ದಾಖಲೆ ತರುವುದು ಕಡ್ಡಾಯವಾಗಿದೆ. ಆನ್‌ ಲೈನ್ ಬುಕ್ಕಿಂಗ್‌ ಗೂ ಕೂಡಾ ಇದು ಕಡ್ಡಾಯವಾಗಿದೆ. ಬೇರೆ ನಗರಗಳಿಗೂ ಇದೆ ನಿಯಮ ವಿಸ್ತರಿಸುವ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಓಯೋ ಉತ್ತರ ಭಾರತ ಪ್ರಾದೇಶಿಕ ಮುಖ್ಯಸ್ಥ ತಿಳಿಸಿದ್ದಾರೆ. Click