- +91 73497 60202
- [email protected]
- January 22, 2025 7:18 PM
ನ್ಯೂಸ್ ನಾಟೌಟ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅತಿಕ್ ಅಹಮದ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯನಾಗಿದ್ದ ಅತೀಕ್ ಪ್ರವೀಣ್ ಕೊಲೆ ಬಳಿಕ ಆರೋಪಿ ಮುಸ್ತಫಾನಿಗೆ ಆಶ್ರಯ ನೀಡಿ ಸಹಾಯ ಮಾಡಿದ್ದ. ಮುಸ್ತಫಾನನ್ನು ಚೆನ್ನೈಗೆ ಕಳಿಸಿ ಪರಾರಿಯಾಗಲು ನೆರವು ನೀಡಿದ್ದ. ಹೀಗಾಗಿ, ಆತನನ್ನು ಬಂಧಿಸಲಾಗಿದೆ. ಈ ಕುರಿತು ಎನ್ಐಎಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಬೆಳ್ಳಾರೆಯಲ್ಲಿ 2022ರ ಜುಲೈನಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು. ಪೊಲೀಸರು ಈವರೆಗೂ 21 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅತೀಕ್ ಪ್ರಕರಣದ ಮುಖ್ಯ ಆರೋಪಿಗಳಲ್ಲಿ ಒಬ್ಬನಾಗಿದ್ದು, ಈ ಪ್ರಕರಣದಲ್ಲಿ ಇದುವರೆಗೆ ಪೊಲೀಸರು 23 ಜನ ಆರೋಪಿಗಳಿರುವ ಬಗ್ಗೆ ಅವರ ವಿರುದ್ಧ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ