ನ್ಯೂಸ್ ನಾಟೌಟ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿದ್ದು, ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಕುಂಭಮೇಳಕ್ಕೆ ತೆರಳಿದ್ದ ಇವರು, ಸ್ನಾನಕ್ಕೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಮಾಧ್ಯಮವೊಂದರಲ್ಲಿ ವರದಿಯಾಗಿದೆ. ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಅವರ ಮಗಳು ಮೇಘಾ ಹತ್ತರವಾಠ್ ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ.
ಮಹಾ ಕುಂಭಮೇಳಕ್ಕೆ ಹೋಗಿದ್ದ ತಾಯಿ ಜ್ಯೋತಿ ಮತ್ತು ಮಗಳು ಮೇಘಾ ಒಬ್ಬರೂ ಇಂದು ಬೆಳಗ್ಗೆ ಸ್ನಾನಕ್ಕೆ ಹೋಗಿದ್ದು, ಮನೆಯವರು ಫೋನ್ ಮಾಡಿದ್ರೂ ರಿಸೀವ್ ಮಾಡಿರಲಿಲ್ಲ.ವಾಹಿನಿಗಳಲ್ಲಿ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಪ್ರಸಾರ ಆಗುತ್ತಿದ್ದಂತೆಯೇ ಮನೆಯವರು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ.ಆದರೆ ಮೊಬೈಲ್ ಫೋನ್ ರಿಂಗ್ ಆಗುತ್ತಿದ್ದರೂ ರಿಸೀವ್ ಮಾಡದ ಕಾರಣ ಕುಟುಂಬ ಸದಸ್ಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು.