- +91 73497 60202
- [email protected]
- January 22, 2025 7:20 PM
ಸೈಫ್ ಮೇಲೆ ಹಲ್ಲೆ ಮಾಡಿದವ ಅರೆಸ್ಟ್..! ಹೆಸರು ಬದಲಿಸಿಕೊಂಡಿದ್ದ ಆರೋಪಿ ಬಾಂಗ್ಲಾ ಪ್ರಜೆ ಎಂದ ಮುಂಬೈ ಪೊಲೀಸ್..!
ನ್ಯೂಸ್ ನಾಟೌಟ್ : ನಟ ಸೈಫ್ ಅಲಿ ಖಾನ್ (Saif Ali Khan) ಮುಂಬೈ ಮನೆಗೆ ನುಗ್ಗಿ ನಟನಿಗೆ ಆರು ಬಾರಿ ಇರಿದ ಹಲ್ಲೆಕೋರನನ್ನು ಬಂಧಿಸಲಾಗಿದ್ದು, ಆತ 5-6 ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದಾನೆ ಎಂದು ಮುಂಬೈ ಪೊಲೀಸರು (Mumbai Police) ಹೇಳಿದ್ದಾರೆ. ಇಂದು(ಜ.19) ಮಾತನಾಡಿದ ಡಿಸಿಪಿ ದೀಕ್ಷಿತ್ ಗೆಡಮ್, ಸೈಫ್ ಅಲಿಖಾನ್ ಮನೆಯಲ್ಲಿ ನಡೆದ ಕಳ್ಳತನ ಯತ್ನಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಥಾಣೆಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿದೆ ಎಂದರು. ಈ ಆರೋಪಿ ಬಾಂಗ್ಲಾದೇಶದವನಾಗಿರುವುದಕ್ಕೆ ಬೇಕಾದ ದಾಖಲೆಗಳು ದೊರೆತಿವೆ ಎಂದು ತನಿಖೆಯಿಂದ ತಿಳಿದುಬಂದಿದೆ. ಅವನ ಬಳಿ ಯಾವುದೇ ಭಾರತೀಯ ದಾಖಲೆಗಳಿಲ್ಲ. ಅವನು ಬಾಂಗ್ಲಾದೇಶದವನೆಂದು ನಾವು ಶಂಕಿಸಿದ್ದೇವೆ, ನಾವು ತನಿಖೆ ನಡೆಸುತ್ತಿದ್ದೇವೆ ಮತ್ತು ಅವನ ವಿರುದ್ಧದ ಪ್ರಕರಣಕ್ಕೆ ಪಾಸ್‌ಪೋರ್ಟ್ ಕಾಯ್ದೆಯ ಆರೋಪಗಳನ್ನು ಸೇರಿಸಿದ್ದೇವೆ ಎಂದು ತಿಳಿಸಿದರು. ಆರೋಪಿ ಬಾಂಗ್ಲಾದೇಶದವನೆಂದು ಸೂಚಿಸುವ ಕೆಲವು ವಸ್ತುಗಳನ್ನು ಆತನಿಂದ ವಶಪಡಿಸಿಕೊಂಡಿದ್ದೇವೆ. ಅವನು ಭಾರತಕ್ಕೆ ಅಕ್ರಮವಾಗಿ ಬಂದು ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದಾನೆ. ಸುಮಾರು ನಾಲ್ಕು ತಿಂಗಳಿನಿಂದ ಮುಂಬೈ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿಸುತ್ತಿದ್ದ. ನಂತರ ಮನೆಗೆಲಸದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಮೊದಲ ಬಾರಿಗೆ ಸೈಫ್ ನಿವಾಸ ಪ್ರವೇಶಿಸಿದ್ದಾನೆ. ದರೋಡೆ ಮಾಡುವ ಉದ್ದೇಶದಿಂದಲೇ ಆತ ಮನೆಗೆ ಪ್ರವೇಶಿಸಿದ್ದ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಕಸ್ಟಡಿಗೆ ಪಡೆಯಲಾಗುವುದು. ನಂತರ ಹೆಚ್ಚಿನ ತನಿಖೆ ನಡೆಯಲಿದೆ ಎಂದು ಹೇಳಿದರು. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ