ನ್ಯೂಸ್ ನಾಟೌಟ್: ಕಾಂಗ್ರೆಸ್ ಸಿಎಂ ಕುರ್ಚಿ ರೇಸ್ ಬಗ್ಗೆ ಚರ್ಚೆಗಳು ಜೋರಾಗಿದ್ದು, ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಭಾವಚಿತ್ರ ಇರೋ ಬಿತ್ತಿಪತ್ರ ಕೈಯಲ್ಲಿ ಹಿಡಿದು ಅಭಿಮಾನಿಗಳು ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ದೇವರ ಮೊರೆ ಹೋಗುತ್ತಿದ್ದು ಅದರಂತೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಎಸ್.ಟಿ ಬ್ಲಾಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಪರಶುರಾಮ ಪೂಜಾರಿ ನೇತೃತ್ವದ ಬೆಂಬಲಿಗರು ಸಿಗಂದೂರು ದೇವಸ್ಥಾನದಲ್ಲಿ ಸತೀಶ್ ಜಾರಕಿಹೊಳಿ ಅವರ ಭಿತ್ತಿ ಪತ್ರ ಹಿಡಿದು ವಿಶೇಷ ಪೂಜೆ ಸಲ್ಲಿಸಿದರು.
ಕಳೆದ ವಾರವಷ್ಟೇ ಅಭಿಮಾನಿಯೊರ್ವ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಲೆಂದು ಪೂಜೆ ಸಲ್ಲಿಸಿದ್ದ ಬಗ್ಗೆ ವರದಿಯಾಗಿತ್ತು.