ನ್ಯೂಸ್ ನಾಟೌಟ್: ಪುಟ್ಟ ಕಂದಮ್ಮನ ಜೀವ ಉಳಿಸಲು ಝೀರೋ ಟ್ರಾಫಿಕ್ ಮೂಲಕ ಮಂಗಳೂರಿಗೆ ತುರ್ತಾಗಿ ಆಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋದಂತಹ ಘಟನೆ ಇಂದು ಸಂಜೆ ನಡೆದಿದೆ.
ವಿರಾಜಪೇಟೆಯ ಮಗುವೊಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿತ್ತು. ತಕ್ಷಣ ಆ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಮಂಗಳೂರಿಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಮತ್ತು ಸುಳ್ಯ ತಾಲೂಕು ಆಂಬ್ಯುಲೆನ್ಸ್ ಚಾಲಕ- ಮಾಲಕರ ಸಹಕಾರದಿಂದ ಮಗುವನ್ನು ಝೀರೋ ಟ್ರಾಫಿಕ್ ಮೂಲಕ ಕಳುಹಿಸಿಕೊಡಲಾಯಿತು. ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ವರದಿ: ಅಚ್ಚು ಪ್ರಗತಿ