ನ್ಯೂಸ್ ನಾಟೌಟ್:1950 ಜನವರಿ 25 ರಂದು ಭಾರತೀಯ ಚುನಾವಣಾ ಆಯೋಗದ ಸಂಸ್ಥಾಪನೆಯಾಯಿತು. ಈ ದಿನವನ್ನು ಗುರುತಿಸಲು ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ “ರಾಷ್ಟ್ರೀಯ ಮತದಾರರ ದಿನಾಚರಣೆ”ಯನ್ನು ಜ.24 ಶುಕ್ರವಾರದಂದು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಫಾರ್ಮಾಕಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಸವಿನ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಮತದಾನದ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮವು ಯುವ ಮತದಾರರನ್ನು ಚುನಾವಣೆಯಲ್ಲಿ ಭಾಗವಹಿಸಲು ಮತ್ತು ಮತದಾನ ಪ್ರಕ್ರಿಯೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಪ್ರೋತ್ಸಾಹಿಸಿತು. ಪ್ರತಿಜ್ಞೆ ಸ್ವೀಕರಿಸುವ ಮೂಲಕ, ವಿದ್ಯಾರ್ಥಿಗಳು ಪ್ರಜಾಪ್ರಭುತ್ವವನ್ನು ಬೆಂಬಲಿಸುವುದಾಗಿ ಮತ್ತು ದೇಶದ ಬೆಳವಣಿಗೆಗೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಈ ಮೂಲಕ ವಿದ್ಯಾರ್ಥಿಗಳಿಗೆ ನಾಗರಿಕರಾಗಿ ತಮ್ಮ ಕರ್ತವ್ಯಗಳ ಬಗ್ಗೆ ಕಲಿಸಲು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿರಲು ಈ ಕಾರ್ಯಕ್ರಮವು ಒಂದು ಉತ್ತಮ ವೇದಿಕೆಯಾಗಿ ಹೊರಹೊಮ್ಮಿತು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು ,ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.