ನ್ಯೂಸ್ ನಾಟೌಟ್: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಇಂದು(ಜ.4) ಸ್ಫೋಟ ಸಂಭವಿಸಿದೆ. ಇದುವರೆಗೆ 6 ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕಾರ್ಖಾನೆ ಪರವಾನಗಿ ಹೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
Click