ನ್ಯೂಸ್ ನಾಟೌಟ್ : ತಿರುಮಲದಲ್ಲಿ ಬುಧವಾರ ರಾತ್ರಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
ನಿರ್ಮಲಾ (50) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಕಾಲ್ತುಳಿತ ದುರಂತದಲ್ಲಿ ಐವರು ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ ತಮಿಳುನಾಡಿನ ಸೇಲಂ ನಿವಾಸಿ ಮಲ್ಲಿಕಾ ಮೃತ ದುರ್ದೈವಿಗಳು ಎನ್ನಲಾಗಿದೆ. 48 ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಳೆ (ಶುಕ್ರವಾರ) ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ತಿರುಪತಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.