- +91 73497 60202
- [email protected]
- January 9, 2025 9:54 PM
ನ್ಯೂಸ್ ನಾಟೌಟ್: ಮಲ್ಪೆ ಮೀನುಗಾರಿಕೆ ಬಂದರಿನ ಜೆಟ್ಟಿಯಲ್ಲಿ ನಿಲ್ಲಿಸಲಾಗಿದ್ದ ಮೀನು ತುಂಬಿರುವ ಬೋಟ್ ನಿಂದ ಕಳ್ಳರು ಸುಮಾರು 15 ಸಾವಿರ ರೂ. ಬೆಲೆ ಬಾಳುವ ಉತ್ತಮ ಜಾತಿಯ ಮೀನನ್ನು ಎಗರಿಸಲು ಮುಂದಾಗಿದ್ದ ವೇಳೆ ಬೋಟ್ ನ ಕಾರ್ಮಿಕರ ಕೈಗೆ ಸಿಕ್ಕಿ ಬಿದ್ದು ಏಟು ತಿಂದ ಘಟನೆ ಶನಿವಾರ ತಡರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ಸುಮಾರು 12 ಗಂಟೆ ವೇಳೆಗೆ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಬೋಟ್ ಗೆ ಮೂವರು ಬಂದು ಬೋಟ್ ನ ಕಾರ್ಮಿಕರು ಗಾಢ ನಿದ್ರೆಯಲ್ಲಿರುವುದನ್ನು ಗಮನಿಸಿ ಬೋಟ್ ನ ಸ್ಟೋರೇಜ್ ನ ಮುಚ್ಚಳ ತೆರೆದು ಅದರೊಳಗೆ ಒಬ್ಬನನ್ನು ಇಳಿಸಿದ್ದರು. ಅಲ್ಲಿಂದ ಕಳವು ಮಾಡುವಾಗ ಬೋಟ್ ನ ಕಾರ್ಮಿಕನೋರ್ವನಿಗೆ ಎಚ್ಚರವಾಗಿ ಬೊಬ್ಬೆ ಹಾಕಿದ್ದ. ಬೋಟ್ ನ ಮೇಲೆ ಇದ್ದವರಲ್ಲಿ ಇಬ್ಬರು ಓಡಿ ಹೋಗಿದ್ದು, ಒಬ್ಬ ಸ್ಟೋರೇಜ್ ನ ಒಳಗೆ ಸಿಕ್ಕಿ ಹಾಕಿಕೊಂಡಿದ್ದ. ಬೋಟ್ ನ ಕಾರ್ಮಿಕರು ಆತನನ್ನು ಹಿಡಿದು ವಿಚಾರಿಸಿ ಬೋಟು ಮಾಲಕರಿಗೆ ಒಪ್ಪಿಸಿದ್ದಾರೆ. ಈ ಮೂವರು ಗದಗ ಮೂಲದವರೆನ್ನಲಾಗಿದೆ. ಕಳೆದ ಎರಡು ವರ್ಷದಿಂದ ಮೀನು ಕಳ್ಳತನ ಮಾಡುವ ಕೃತ್ಯ ಹೆಚ್ಚುತ್ತಿದ್ದು ಕಳೆದ ಎರಡು ತಿಂಗಳಿನಿಂದ ಇದು ನಿತ್ಯ ನಡೆಯುತ್ತಿದೆ. ಇದೀಗ ಕೆಲವೊಂದು ಬೋಟುಗಳಲ್ಲಿ ಸಿಸಿ ಕೆಮರಾ ಅಳವಡಿಸಿದ್ದರಿಂದ ಕಳ್ಳತನ ನಡೆಯುತ್ತಿರುವುದು ಬೆಳಕಿಗೆ ಬರುತ್ತಿದೆ ಎನ್ನಲಾಗುತ್ತದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ