ನ್ಯೂಸ್ ನಾಟೌಟ್: ವಿವಾಹಿತ ಹಿಂದೂ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರವೆಸಗಿ ಆಕೆಯನ್ನು ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಇಮ್ರಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಇಮ್ರಾನ್ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದ್ದು, ಹಿಂದೂ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸುತ್ತಿದ್ದ ಇಮ್ರಾನ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲಗಳ ಪ್ರಕಾರ ವಿವಾಹಿತ ಮಹಿಳೆ ಮೇಲೆ ಬೆದರಿಕೆ ಹಾಕಿ ಪದೇ ಪದೇ ಅತ್ಯಾಚಾರವೆಸಗಿದ್ದ. ಅನ್ಯ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ. ಆರೋಪಿಯು ಜನವರಿ 9 ರಂದು ತನ್ನೊಂದಿಗೆ ಬರಲು ಮಹಿಳೆಗೆ ಆಮಿಷವೊಡ್ಡಿದ್ದ, ಆಕೆಯನ್ನು ಬಲವಂತಾಗಿ ಕರೆದೊಯ್ದಿದ್ದ. ಈ ಬಗ್ಗೆ ಮಾಹಿತಿ ಪಡೆದ ಪತಿಯ ದೂರಿನ ಮೇರೆಗೆ ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡು ಆರೋಪಿ ಇಮ್ರಾನ್ ಎಂಬಾ ನನ್ನು ಬಂಧಿಸಿದ್ದು, ಮಹಿಳೆಯನ್ನು ರಕ್ಷಿಸಿದ್ದಾರೆ.
ಇಮ್ರಾನ್ ತನ್ನ ಧರ್ಮ ಗುರುಗಳಿಗೆ ಆಕೆಯನ್ನು ಪರಿಚಯಿಸಿ ನಮಾಜ್ ಮಾಡುವಂತೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಇದಲ್ಲದೆ ಸಂತ್ರಸ್ತೆ ಚಿನ್ನಾಭರಣ ಮತ್ತು ನಗದು ಸಹಿತ ಮನೆ ಬಿಟ್ಟು ಹೋಗಿದ್ದಾಳೆ ಎಂದು ಪತಿ ದೂರಿನಲ್ಲಿ ತಿಳಿಸಿದ್ದಾರೆ. ಜನವರಿ 24 ರಂದು ಸೆಕ್ಷನ್ 87 ಮತ್ತು ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ದೂರು ದಾಖಲಿಸಲಾಗಿತ್ತು.
Click