21.6 C
Sullia
Sunday, March 8, 2026

ಸುಳ್ಯ: ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಮತ್ತು ನರ್ಸಿಂಗ್ ಸೈನ್ಸಸ್ ಸಹಯೋಗದಲ್ಲಿ ಪೌಷ್ಟಿಕ ಆಹಾರ ಜಾಗೃತಿ ಕಾರ್ಯಕ್ರಮ

ನ್ಯೂಸ್ ನಾಟೌಟ್: “ಆರೋಗ್ಯಕರ ಸಮಾಜಕ್ಕೆ ಪೌಷ್ಟಿಕ ಆಹಾರವೇ ಮೂಲ” ಎನ್ನುವ ನಿಟ್ಟಿನಲ್ಲಿ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಮತ್ತು ನರ್ಸಿಂಗ್ ಸೈನ್ಸಸ್ ಸಹಯೋಗದಲ್ಲಿ ಪೌಷ್ಟಿಕ ಆಹಾರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ ಕೆ.ವಿ ಚಿದಾನಂದ, ಪೌಷ್ಟಿಕ ಆಹಾರ ಸೇವನೆ ಆರೋಗ್ಯದ ಅಡಿಪಾಯ. ಸಮತೋಲನ ಆಹಾರ ಪದ್ಧತಿ ಅನುಸರಿಸಿದರೆ ಅನೇಕ ಕಾಯಿಲೆಗಳನ್ನು ತಡೆಗಟ್ಟಬಹುದು. ವಿಶೇಷವಾಗಿ ಮಕ್ಕಳಿಗೆ, ತಾಯಂದಿರಿಗೆ ಹಾಗೂ ಯುವಜನತೆಗೆ ಪೌಷ್ಟಿಕತೆಯ ಅರಿವು ಅತ್ಯಂತ ಅಗತ್ಯ” ಎಂದರು.

ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ನ ಪ್ರಾಂಶುಪಾಲರು ಡಾ.ಪ್ರಮೋದ್ ಕೆ. ಜೆ. ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲರು ಚಂದ್ರಾವತಿ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋತೆರಪಿ ಪ್ರಾಂಶುಪಾಲರು ಡಾ. ಮನೀಶ್, ಗೌರವ ಪ್ರಾಧ್ಯಾಪಕರು ಶೀಲಾ ಜಿ ನಾಯಕ್, ಕಮ್ಯೂನಿಟಿ ಮೆಡಿಸಿನ್ ವಿಭಾಗ ಮುಖ್ಯಸ್ಥರು ಡಾ. ದಿನೇಶ್ ಪಿ.ವಿ, ಮೈಕ್ರೋಬಯಾಲಜಿ ವಿಭಾಗದ ಪ್ರೊ. ಡಾ. ನಮ್ರತಾ ಕೆ.ಜಿ, ಜನರಲ್ ಸರ್ಜರಿ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ ಸಾಯಿಗೀತಾ ಜ್ಞಾನೇಶ್, ಪ್ರೊ. ಬಿ ಎಂ ಪ್ರೇಮ, ಆಹಾರ ತಜ್ಞರಾದ ದೀಪ್ತಿ ಎಂ ವೈ, ಪ್ರೊಫೆಸರ್ ನಿಧಿ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿ-ವಿದ್ಯಾರ್ಥಿನಿಯರು ವಿವಿಧ ಪೌಷ್ಟಿಕ ಆಹಾರಗಳನ್ನು ತಯಾರಿಸಿ ಸಂಭ್ರಮಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾದ್ಯಾಪಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡರು.

Related Articles

LEAVE A REPLY

Please enter your comment!
Please enter your name here

Latest Articles