21.6 C
Sullia
Saturday, March 7, 2026

ಉಡುಪಿಯಲ್ಲಿ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಬರ್ಬರ ಹತ್ಯೆ, ಏಕಕಾಲದಲ್ಲಿ ಮೂವರಿಂದ ತಲವಾರು ದಾಳಿ

ನ್ಯೂಸ್‌ ನಾಟೌಟ್: ಉಡುಪಿಯ ಕೊಡವೂರು ಸಮೀಪದ ಸಾಲ್ಮರದಲ್ಲಿ ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ನನ್ನು ಮೂವರು ದುಷ್ಕರ್ಮಿಗಳು ಮಾರಕಾಯಧಗಳಿಂದ ಹತ್ಯೆ ಮಾಡಿದ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ಕೃತ್ಯವನ್ನು ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರು ಆರೋಪಿಗಳು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಡುಪಿ‌ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಸೈಫುದ್ದಿನ್ ವಿರುದ್ಧ ಒಟ್ಟು 18 ಪ್ರಕರಣಗಳು ದಾಖಲಾಗಿದ್ದು, ಉಡುಪಿ ಮತ್ತು ಮಲ್ಪೆ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದಾರೆ. ಎರಡು ಕೊಲೆ ಪ್ರಕರಣದ ನೇರ ಆರೋಪಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಬೆಳಗ್ಗೆ 10 ರಿಂದ 11 ಗಂಟೆಯ ನಡುವೆ ದುಷ್ಕೃತ್ಯ ನಡೆದಿದೆ. ಮೂರು ಜನ ಆರೋಪಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಆರೋಪಿಗಳು AKMS ಖಾಸಗಿ ಬಸ್ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದಾರೆ. ಕೊಲೆಗೆ ಕಾರಣ ಮತ್ತು ಆರೋಪಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಚಾಕು ಮತ್ತು ತಲವಾರ್ ನಿಂದ ದಾಳಿ ಮಾಡಿದ್ದು, ದೇಹದ ಹಲವೆಡೆ ಇರಿದ ಗಾಯಗಳಿವೆ ಎಂದು ಅವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles