21.6 C
Sullia
Sunday, March 8, 2026

ಮಹೇಶ್​ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್! ಗಡಿಪಾರಿಗೆ ಹೈಕೋರ್ಟ್ ತಡೆ

ನ್ಯೂಸ್ ನಾಟೌಟ್ :ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarody) ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ವಿಚಾರಣೆಯನ್ನು ಅ.8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಗಡಿಪಾರು ಆದೇಶ ರದ್ದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ತಿಮರೋಡಿ ಅರ್ಜಿ ಸಲ್ಲಿಸಿದ್ದರು. ನ್ಯಾ. ಸಿ.ಎಂ.ಪೂನಚ್ಚ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

ತಿಮರೋಡಿ ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ಪೆಕ್ಟರ್ ಪ್ರತಿವಾದಿಯಾಗಿಸಿದ್ದರು. ತಕ್ಷಣ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆ ನೀಡಿ ರದ್ದು ಪಡಿಸಲು ಅರ್ಜಿ ಸಲ್ಲಿಸಿದ್ದರು. 

ಸೆ.18 ರಂದು ತಿಮರೋಡಿಯನ್ನು ರಾಯಚೂರಿಗೆ ಗಡಿಪಾರು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದರು. 2025 ರ ಸೆ.18 ರಿಂದ 2026ರ ಸೆ.17 ರ ವರೆಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶಿಸಿದ್ದರು.

ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಹೊರಡಿಸಲಾಗಿತ್ತು. ಆದೇಶ ಪಾಲನೆ ಮಾಡದೇ ಇದ್ದಲ್ಲಿ ಬಂಧಿಸಿ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲು ಸೂಚನೆ ನೀಡಲಾಗಿತ್ತು.

Related Articles

LEAVE A REPLY

Please enter your comment!
Please enter your name here

Latest Articles