ನ್ಯೂಸ್ ನಾಟೌಟ್ : ರಾಜ್ಯದಲ್ಲಿ ದಸರಾ ರಜೆ ಮುಗಿಯಲು ಇನ್ನೂ ಕೆಲವೇ ದಿನಗಳು ಬಾಕಿಯಿರುವಾಗಲೇ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಶಾಲಾ ಮಕ್ಕಳಿಗೆ ಸಂಭ್ರಮ ಶನಿವಾರ’ (ಬ್ಯಾಗ್ ರಹಿತ ದಿನ) ಕಾರ್ಯಕ್ರಮದ ವರದಿಯನ್ನು ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ವಿಷಯಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಶಾಲಾ ಬ್ಯಾಗ್ ಹೊರೆಯನ್ನು ತಗ್ಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದ ದಿನದಂದು ಬ್ಯಾಗ್ ರಹಿತ ದಿನವನ್ನು ಆಚರಣೆ ಮಾಡುವಂತೆ ಉಲ್ಲೇಖ-1ರ ಪತ್ರದಲ್ಲಿ ಆದೇಶ ಹೊರಡಿಸಲಾಗಿದೆ.
ಸದರಿ ಮಾದರಿಗಳು ಅರಿವು, ಅನುಭವ ಮತ್ತು ಅವಲೋಕನ ಎಂಬ ಮೂರು ಹಂತಗಳನ್ನು ಹೊಂದಿದ್ದು, ವಿದ್ಯಾರ್ಥಿಗಳೇ ಸ್ವತಃ ಕೈಗೊಳ್ಳಬಹುದಾದ ಚಟುವಟಿಕೆಗಳು ಆಗಿವೆ. ಸಂಭ್ರಮ ಶನಿವಾರದ ದಿನದಂದು ವೆಬ್‌ಸೈಟ್‌ನಲ್ಲಿ ಲಭ್ಯ ಇರುವ DSERTಯಿಂದ ಸಿದ್ಧಪಡಿಸಿರುವ ಹಾಗೂ ಎನ್‌ಸಿಆರ್‌ಟಿಯಿಂದ ನೀಡಿರುವ ಕಲಿಕಾ ಸಾಮಗ್ರಿಗಳನ್ನು ಉಪಯೋಗಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಎಲ್ಲಾ ಶಿಕ್ಷಕರಿಗೆ ಮಾಹಿತಿ ಒದಗಿಸುವುದು.













