21.6 C
Sullia
Sunday, March 8, 2026

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆ ಆಚರಣೆ

ನ್ಯೂಸ್ ನಾಟೌಟ್ :ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯುಧ ಪೂಜೆಯನ್ನು ಅ.1ರಂದು ಅರ್ಚಕರಾದ ಶ್ರೀ. ನಾರಾಯಣ ಭಟ್ ರವರ ನೇತೃತ್ವದಲ್ಲಿ ನಡೆಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ. ವಿ. ಅವರ ನೇತೃತ್ವದಲ್ಲಿ ಪೂಜಾ ಆರಂಭಗೊಂಡು ಬಳಿಕ ಸಂಸ್ಥೆಯ ಎಲ್ಲಾ ವಿಭಾಗಗಳಿಗೂ, ವಾಹನಗಳಿಗೂ ಆಯುಧ ಪೂಜೆ ನಡೆಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget


ನಂತರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ, ಉಪಾಧ್ಯಕ್ಷರಾದ ಶೋಭಾ ಚಿದಾನಂದ ಇವರ ಉಪಸ್ಥಿತಿಯಲ್ಲಿ ಮಹಾ ಮಂಗಳಾರತಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸಿತರಿದ್ದರು

Related Articles

LEAVE A REPLY

Please enter your comment!
Please enter your name here

Latest Articles