21.6 C
Sullia
Sunday, March 8, 2026

ಕಾಂತಾರ ಚಾಪ್ಟರ್ 1 ವಿಶ್ವದಾದ್ಯಂತ ಇಂದು ರಿಲೀಸ್: ಸಿನಿಮಾದ ಕಥೆ ಏನು? ಪ್ರೇಕ್ಷಕರು ಹೇಳೋದೇನು?

ನ್ಯೂಸ್ ನಾಟ್ : ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌ 1 ಸಿನಿಮಾ (ಅ.2) ವಿಶ್ವದಾದ್ಯಂತ ಗ್ರ್ಯಾಂಡ್‌ ರಿಲೀಸ್‌ ಆಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕರ್ನಾಟಕದಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕಾಂತಾರ 1 ಸಿನಿಮಾ ಬಿಡುಗಡೆಯಾಗಿದೆ. ಮೊದಲ ದಿನ ಎರಡು ಸಾವಿರಕ್ಕೂ ಹೆಚ್ಚು ಪ್ರದರ್ಶನ ಕಾಣಲಿದೆ.

7,000ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಕನ್ನಡ ಸೇರಿದಂತೆ ಸಪ್ತ ಭಾಷೆಗಳಲ್ಲಿ ಭಾರತ ಹಾಗೂ ಭಾರತದಾಚೆಗೂ ಸಿನಿಮಾ ಬಿಡುಗಡೆಯಾಗಲಿದೆ. ರಿಷಬ್ ಶೆಟ್ಟಿ (Rishab Shetty), ರುಕ್ಮಿಣಿ ವಸಂತ್, ಗುಲ್ಶನ್​ ದೇವಯ್ಯ, ತಮಿಳು ನಟ ಜಯರಾಂ ಸೇರಿದಂತೆ ಹಲವರು ಅಭಿನಯಿಸಿದ್ದಾರೆ.

ಕಾಂತಾರ 1 ಪ್ರೀಮಿಯರ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ನಟ ರಿಷಬ್‌ ಶೆಟ್ಟಿ ನಿರ್ದೇಶನ ಮತ್ತು ಅಭಿನಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ಸ್ಟೋರಿ ಮತ್ತು ಮೇಕಿಂಗ್‌ನಲ್ಲಿ ರಿಷಬ್‌ ಶೆಟ್ಟಿ ಯಶಸ್ವಿಯಾಗಿದ್ದಾರೆಂಬ ಮಾತುಗಳು ಪ್ರೀಮಿಯರ್‌ ಶೋ ವೇಳೆ ಕೇಳಿಬಂದಿವೆ.

ಕಾಂತಾರ: ಚಾಪ್ಟರ್ 1′ ಸಿನಿಮಾದ ಕಥೆ ಏನು?

ಬಾಂಗ್ರಾ ರಾಜ ಮನೆತನ ಮತ್ತು ಈಶ್ವರ ಹೂದೋಟದ ಜನರ ನಡುವಿನ ಯುದ್ಧವನ್ನೇ ಪ್ರಧಾನವಾಗಿಟ್ಟುಕೊಂಡು ಮಾಡಿರುವ ಕಥೆ ‘ಕಾಂತಾರ: ಚಾಪ್ಟರ್ 1’ ಚಿತ್ರದ್ದು. ಈಶ್ವರ ಹೂದೋಟದ ಮುಂಚೂಣಿಯ ಯುವ ನಾಯಕ ಬೇರ್ಮೆ ಆಗಿ ನಟ ರಿಷಬ್ ಕಾಣಿಸಿಕೊಂಡರೆ, ಬಾಂಗ್ರಾ ರಾಜ ಮನೆತನದ ಅರಸರಾಗಿ ಜಯರಾಮ್ (ರಾಜಶೇಖರ) ಮತ್ತು ಗುಲ್ಶನ್ ದೇವಯ್ಯ (ಕುಲಶೇಖರ) ಅವರು ಕಾಣಿಸಿಕೊಂಡಿದ್ದಾರೆ. ಇವರ ನಡುವಿನ ಸಮರದಲ್ಲಿ ದೈವದ ಪಾತ್ರವೇನು? ದೈವಕ್ಕೂ ಹೂದೋಟಕ್ಕೂ ಯಾವ ನಂಟು ಎಂಬುದನ್ನು ತೆರೆಮೇಲೆ ಅತ್ಯದ್ಭುತ ಮೇಕಿಂಗ್‌ನೊಂದಿಗೆ ಹೇಳ ಹೊರಟಿದ್ದಾರೆ ನಿರ್ದೇಶಕ ರಿಷಬ್ ಶೆಟ್ಟಿ..

Related Articles

LEAVE A REPLY

Please enter your comment!
Please enter your name here

Latest Articles