ನ್ಯೂಸ್ ನಾಟೌಟ್: ಮನೆಯೊಳಗಿನ ಬೆಡ್ ರೂಂನಲ್ಲಿ ರಹಸ್ಯ ಕ್ಯಾಮರಾ ಇಟ್ಟು ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಕೊಂಡು ಸ್ನೇಹಿತರಿಗೆ ಕಳುಹಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಸೈಯದ್ ಇನಾಮುಲ್ ಎಂಬಾತನೊಂದಿಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಕೆಯ ಮದುವೆಯಾಗಿದೆ. ಆದರೆ, ಆತ ಈಗಾಗಲೇ ಮತ್ತೊಂದು ಮದುವೆಯಾಗಿದ್ದ. ಆ ವಿಚಾರವನ್ನು ತಿಳಿಸದೇ ಎರಡನೇ ಮದುವೆ ಮಾಡಿಕೊಂಡಿದ್ದಾನೆಂದು ಆರೋಪ ಮಾಡಲಾಗಿದೆ.
ಮನೆಯ ಬೆಡ್ ರೂಂನಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಸಿ ಹೆಂಡತಿ ಜತೆಗಿನ ಲೈಂಗಿಕ ಕ್ರಿಯೆಯ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದ ಆರೋಪಿ, ಆ ಖಾಸಗಿ ವಿಡಿಯೋಗಳನ್ನು ದುಬೈಯಲ್ಲಿ ವಾಸಿಸುವ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಷ್ಟೇ ಅಲ್ಲದೆ, ಹೊರದೇಶದಲ್ಲಿರುವ ತನ್ನ ಕೆಲವು ಮಂದಿ ಸ್ನೇಹಿತರೊಂದಿಗೂ ದೈಹಿಕ ಸಂಬಂಧ ಬೆಳೆಸುವಂತೆ ಪತ್ನಿಯನ್ನು ಒತ್ತಾಯಿಸಿರುವ ಗಂಭೀರ ಆರೋಪ ಕೂಡ ದಾಖಲಾಗಿದೆ. ಆರೋಪಿಗೆ ವಿವಾಹದ ಸಮಯದಲ್ಲಿ ವರದಕ್ಷಿಣೆಯಾಗಿ ಯಮಹಾ ಏರೋಕ್ ದ್ವಿ ಚಕ್ರ ವಾಹನ, 340 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಕೊಲಾಗಿತ್ತು.













