21.6 C
Sullia
Sunday, March 8, 2026

ಕಾಂತಾರ’ ಚಿತ್ರ ನೋಡಿ ಹುಚ್ಚಾಟ, ದೈವದ ಅನುಕರಣೆ ಮಾಡಿದ ಪ್ರೇಕ್ಷಕರು! ನಿರ್ದೇಶಕ ರಿಷಬ್​​ಗೆ ತುಳುಕೂಟ ಪತ್ರ!

ನ್ಯೂಸ್ ನಾಟೌಟ್ : ಈ ಹಿಂದೆ 2022 ರಲ್ಲಿ ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗ ಆರ್ಕೆಸ್ಟ್ರಾಗಳಲ್ಲಿ, ಖಾಸಗಿ ಕಾರ್ಯಕ್ರಮಗಳಲ್ಲಿ, ಟಿವಿ ಶೋಗಳಲ್ಲಿ ದೈವದ ಅನುಕರಣೆ ಮಾಡಲಾಗುತ್ತಿತ್ತು. ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆದಾಗಲೂ ಮತ್ತೆ ದೈವದ ಅನುಕರಣೆ ಮಾಡುತ್ತಿರುವ ಘಟನೆಗಳು ವರದಿ ಆಗುತ್ತಿವೆ. ಇದನ್ನು ತುಳುಕೂಟ ವಿರೋಧಿಸಿದ್ದು, ರಿಷಬ್ ಶೆಟ್ಟಿಗೆ ಪತ್ರ ಬರೆದು ತಮ್ಮ ಅಸಮಾಧಾನ ವ್ಯಕ್ತಪಡಿಸಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ರಿಷಬ್ ಶೆಟ್ಟಿ ಅವರೇ ನೀವು ದೈವಗಳಲ್ಲಿ ಅಪಾರ ನಂಬಿಕೆ ಇರುವವರು ಎಂದು ಹಲವು ಬಾರಿ ಹೇಳಿಕೊಂಡಿದ್ದೀರಿ. ನೀವು ದೈವದ ಬಗ್ಗೆ ಸಿನಿಮಾ ಮಾಡಿದ್ದೀರಿ ಅದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ ನಿಮ್ಮ ಸಿನಿಮಾ ನೋಡುವ ಅಭಿಮಾನಿಗಳಿಗೆ ದೈವದ ಬಗ್ಗೆ ಜಾಗೃತಿ ಮೂಡಿಸಿ. ‘ಕಾಂತಾರ’ ಬಂದಾಗಿನಿಂದಲೂ ದೈವದ ಅನುಕರಣೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ವ್ಯಕ್ತಿಯೊಬ್ಬ ದೈವದ ವೇಷ ಧರಿಸಿ ಚಿತ್ರಮಂದಿರಕ್ಕೆ ಬಂದ ವಿಡಿಯೋ ವೈರಲ್ ಆಗಿತ್ತು. ಸಿನಿಮಾ ನೋಡುವಾಗಲೇ ಕೆಲ ಪ್ರೇಕ್ಷಕರು ದೈವ ಬಂದವರಂತೆ ವರ್ತಿಸಿದ್ದಾರೆ. ಇನ್ನು ಕೆಲವರು ಚಿತ್ರಮಂದಿರದಿಂದ ಹೊರಬಂದಾಗ ಕೂಗಾಡಿದ ವಿಡಿಯೋಗಳು ವೈರಲ್ ಆಗಿವೆ’

ದಿನಬೆಳಗಾದರೆ ಇಂಥಹಾ ವಿಡಿಯೋಗಳನ್ನು ನೋಡಿ ನಾವು ರೋಸಿ ಹೋಗಿದ್ದೇವೆ. ಇವೆಲ್ಲವನ್ನೂ ನೋಡಿ ನೀವೇಕೆ ಮೌನವಾಗಿದ್ದೀರಿ ಎಂಬುದು ತಿಳಿಯುತ್ತಿಲ್ಲ. ಸಿನಿಮಾ ಪ್ರದರ್ಶನಕ್ಕೆ ಮುಂಚೆ ಈ ಬಗ್ಗೆ ಒಂದು ಡಿಸ್​​ಕ್ಲೇಮರ್ (ಎಚ್ಚರಿಕೆ) ಹಾಕಿ ಎಂದು ಈ ಹಿಂದೆಯೇ ಮನವಿ ಮಾಡಿದ್ದೆವು. ಆದರೆ ಈ ಬಗ್ಗೆ ನಿಮಗೆ ಯಾಕೆ ಅಷ್ಟೋಂದು ನಿರ್ಲಕ್ಷ್ಯವೋ ತಿಳಿಯುತ್ತಿಲ್ಲ. ದೈವಾರಾದನೆ ನಮ್ಮ ನಂಬಿಕೆ. ಕೂಡಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಜಾಗೃತಿ ಮೂಡಿಸಿ ಜೊತೆಗೆ ಸಿನಿಮಾ ಪ್ರದರ್ಶನಕ್ಕೆ ಮುಂಚೆ ಡಿಸ್​​ಕ್ಲೇಮರ್ ಹಾಕಿ’ ಎಂದು ತುಳುಕೂಟ ಆಗ್ರಹಿಸಿದೆ.

Related Articles

LEAVE A REPLY

Please enter your comment!
Please enter your name here

Latest Articles