ನ್ಯೂಸ್ ನಾಟೌಟ್ : ಇನ್ಮುಂದೆ ಶಾಲಾ ಪಠ್ಯದಲ್ಲಿ ಹೊಸದಾಗಿ ರಾಮಾಯಣವೂ (Ramayana) ಸೇರ್ಪಡೆಯಾಗಲಿದೆ. ಈ ಕ್ರಮ ಸದ್ಯದಲ್ಲಿಯೇ ಕೈಗೊಳ್ಳಲಾಗುವುದು ಎಂದು ಸಿ ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು. ಈ ವೇಳೆ, ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ, ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು.
SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್‌ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದರು.













