ನ್ಯೂಸ್ ನಾಟೌಟ್ : ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ (Siddaramaiah) ಮೊಮ್ಮಗ ಧವನ್ ರಾಕೇಶ್ (Dhawan Rakesh) ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ ಎಂಬ ಬಗ್ಗೆ ಚರ್ಚೆಗಳು ನಡಿತಿವೆ.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಜೊತೆಗಿನ ಫೋಟೊಗಳನ್ನು ಸಿದ್ದರಾಮಯ್ಯ ಮೊಮ್ಮಗ ತನ್ನ ಇನ್‌ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದು, ಭಾರಿ ಮೆಚ್ಚುಗೆ ವ್ಯಕ್ತವಾಗಿವೆ.













