ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ದುಗ್ಗಲಡ್ಕದಲ್ಲಿ ನೇಣುಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಮೃತರನ್ನು ಬಾಬು ನಾಯಕ್ ಎಂದು ಗುರುತಿಸಲಾಗಿದೆ. ಅವರಿಗೆ 55 ವರ್ಷ ವಯಸ್ಸಾಗಿತ್ತು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿದೆ.