ನ್ಯೂಸ್ ನಾಟೌಟ್ : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು ಮುಂದಿನ 10 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.
ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.













