27.7 C
Sullia
Sunday, March 8, 2026

ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ: ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ದ್ರೌಪದಿ ಮುರ್ಮು


Ad Widget
Ad Widget
Ad Widget
Ad Widget
Ad Widget
Ad Widget
Ad Widget

ನ್ಯೂಸ್ ನಾಟೌಟ್ : ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ (Sabarimala) ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.

ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದು,ಶಬರಿಮಲೆಗೆ ಭೇಟಿ ನೀಡಿದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಅ.23ರಂದು ತಿರುವನಂತಪುರದ ರಾಜಭವನದಲ್ಲಿ ಮಾಜಿ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ನಂತರ ವರ್ಕಲಾದ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.

ಅದೇ ದಿನ ಪಲೈನಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ಪ್ಲಾಟಿನಂ ಜುಬಿಲಿ ಸಮಾರೋಪ ಸಮಾರಂಭದಲ್ಲಿಯೂ ಭಾಗಿಯಾಗಲಿದ್ದಾರೆ. ಅ.24ರಂದು ಎರ್ನಾಕುಲಂನ ಸೇಂಟ್ ತೆರೇಸಾ ಕಾಲೇಜಿನ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles