21.6 C
Sullia
Sunday, March 8, 2026

ಸುಳ್ಯ: ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಘಟಕ ಉದ್ಘಾಟನೆ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ಅ. 25ರಂದು ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕವನ್ನುಉದ್ಘಾಟಿಸಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರ್ಯಕ್ರಮವನ್ನು ನೆಹರು ಮೆಮೋರಿಯಲ್ ಕಾಲೇಜಿನ ಸಮಾಜಾಶಾಸ್ತ್ರ ವಿಭಾಗದ ಮುಖ್ಯಸ್ಥೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿ ಚಿತ್ರಲೇಖ ಕೆ ಎಸ್ ಉದ್ಘಾಟಿಸಿ ಶುಭಹಾರೈಸಿದರು. ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ ವಿ ದಾಮೋದರ ಗೌಡ , ಕಾಲೇಜಿನ ಪ್ರಾಂಶುಪಾಲೆ ಪ್ರೊ ಟೀನಾ ಎಚ್ ಎಸ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಸಂಯೋಜಕಿ ಉಪನ್ಯಾಸಕಿ ನಯನ ಪಿ ಯು, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯದರ್ಶಿ ವಿದ್ಯಾರ್ಥಿ ತೇಜಸ್ ಎನ್, ಜತೆಕಾರ್ಯದರ್ಶಿ ವಿದ್ಯಾರ್ಥಿನಿ ಕು. ಪ್ರಲೋಕ್ಷಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಅನೀಷ ಪ್ರಾರ್ಥಿಸಿದರು. ಆಶಿಕಾ ಮತ್ತು ತಂಡ ರಾಷ್ಟ್ರೀಯ ಸೇವಾ ಯೋಜನಾ ಗೀತೆ ಹಾಡಿದರು. ರಾಷ್ಟ್ರೀಯ ಸೇವಾ ಘಟಕದ ಸಂಯೋಜಕಿ ನಯನ ಪಿ ಯು ಸ್ವಾಗತಿಸಿದರು. ವಿದ್ಯಾರ್ಥಿನಿ ಪ್ರಲೋಕ್ಷಾ ವಂದಿಸಿದರು. ವಿದ್ಯಾರ್ಥಿನಿ ಅನುಷ್ಯ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Latest Articles