27.7 C
Sullia
Sunday, March 8, 2026

ಮೊಂಥಾ’ ಸೈಕ್ಲೋನ್ ಎಫೆಕ್ಟ್, ಕರ್ನಾಟಕ ತಮಿಳುನಾಡಿಗೆ ಮಳೆಯಾರ್ಭಟ!:ಧಾರಾಕಾರ ಮಳೆ, ಅತೀ ವೇಗದ ಗಾಳಿ, ಸಂಭವನೀಯ ಪ್ರವಾಹದ ಸಾಧ್ಯತೆ 

ನ್ಯೂಸ್ ನಾಟೌಟ್ :ಮೊಂಥಾ ಚಂಡಮಾರುತದ ಪ್ರಭಾವದಿಂದ ಮಳೆಯಾರ್ಭಟದ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮಂಗಳವಾರ (ಅ.28) ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ ಪ್ರದೇಶಕ್ಕೆ ಮೊಂಥಾ ಚಂಡಮಾರುತ 110 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದ್ದು, ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 26 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರಾಕಾರ ಮಳೆ, ಅತೀ ವೇಗದ ಗಾಳಿ ಮತ್ತು ಸಂಭವನೀಯ ಪ್ರವಾಹದ ಸಾಧ್ಯತೆ ಇದೆ ಎಂದು ಹವಾಮಾವ ಇಲಾಖೆ ತಿಳಿಸಿದೆ.

ಮಳೆ ಮುನ್ಸೂಚನೆ ಹಿನ್ನೆಲೆ ಆಂಧ್ರಪ್ರದೇಶದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರ ತೀರ ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರ ಮಾಡಿದ್ದು, ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಮೊಂಥಾ ಚಂಡಮಾರುತದಿಂದ ಮುಂದಿನ ಮೂರ್ನಾಲ್ಕು ದಿನ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿ ರಾಜ್ಯಾದ್ಯಂತ ಅಲ್ಲಲ್ಲಿ ನಿರಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ

Related Articles

LEAVE A REPLY

Please enter your comment!
Please enter your name here

Latest Articles