21.6 C
Sullia
Sunday, March 8, 2026

ಸುಳ್ಯ: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ರೆಡ್‌ಕ್ರಾಸ್ ಘಟಕ ಉದ್ಘಾಟನೆ

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ರೆಡ್ ಕ್ರಾಸ್ ಘಟಕದ ಉದ್ಘಾಟನೆ ಅ. 27ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ರಕ್ತ ಕೇಂದ್ರದ ಅಧಿಕಾರಿ ಡಾ. ಅಂಜಲಿ ರಾವ್ ನೆರವೇರಿಸಿ ರಕ್ತದಾನದ ಮಹತ್ವದ ಬಗ್ಗೆ ಮಾತನಾಡಿ, “ರಕ್ತದಾನ ಮನುಷ್ಯನ ಜೀವ ಉಳಿಸುವ ದಾನವಾಗಿದ್ದು, ಎಲ್ಲರೂ ರಕ್ತದಾನದಲ್ಲಿ ಕೈ ಜೋಡಿಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ. ದಾಮೋದರ ಗೌಡ , ಕಾಲೇಜಿನ ಪ್ರಾಂಶುಪಾಲೆ ಪ್ರೊ ಟೀನಾ ಎಚ್ ಎಸ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಸಂಯೋಜಕಿ ಉಪನ್ಯಾಸಕಿ ಅರ್ಚನಾ ಆರ್ ರೈ, ಘಟಕದ ಕಾರ್ಯದರ್ಶಿ ವಿದ್ಯಾರ್ಥಿ ಶಬೀರ್ ಆಲಿ, ಜತೆಕಾರ್ಯದರ್ಶಿ ವಿದ್ಯಾರ್ಥಿನಿ ಅನುಷ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿ ರಂಜಿತ್ ಎಚ್ ಎಮ್ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಘಟಕದ ಸಂಯೋಜಕಿ ಉಪನ್ಯಾಸಕಿ ಅರ್ಚನ ಆರ್ ರೈ ಸ್ವಾಗತಿಸಿದರು. ಘಟಕದ ವಿದ್ಯಾರ್ಥಿ ಕಾಯದರ್ಶಿ ಶಬೀರ್ ಆಲಿ ವಂದಿಸಿದರು. ವಿದ್ಯಾರ್ಥಿನಿ ಕೃಷ್ಣವೇಣಿ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Latest Articles