ನ್ಯೂಸ್ ನಾಟೌಟ್ : ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ಕಾರು ಮೂರು ವರ್ಷದ ಬಾಲಕಿಗೆ (Accident) ಡಿಕ್ಕಿಯಾಗಿರುವ ಘಟನೆ ಅಹಮದಾಬಾದ್ನ ನೋಬಲ್ನಗರದಲ್ಲಿ .ನಡೆದಿದೆ.
ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸರೆಯಾಗಿದ್ದು, ಬಾಲಕಿಗೆ ಕಾರಿನ ಮುಂಭಾಗ ಡಿಕ್ಕಿಯಾಗಿ ಕೆಳಕ್ಕೆ ಬಿದ್ದಿದ್ದಾಳೆ. ಅದೃಷ್ಟವಶಾತ್ ಬಾಲಕಿ ಕಾರಿನ ನಡು ಭಾಗದಲ್ಲಿ ಕೆಳಗೆ ಬಿದ್ದಿದ್ದಾಳೆ. ಕಾರು ಮುಂದೆ ಚಲಿಸುತ್ತಿದ್ದಂತೆ, ಹಿಂಬದಿಯಿಂದ ಎದ್ದು ನಡೆದು ಬಂದಿದ್ದಾಳೆ. ಈ ವೇಳೆ ಅಪ್ರಾಪ್ತ ಕಾರು ನಿಲ್ಲಿಸಿ ಬಾಲಕಿ ಬಳಿ ಬಂದಿದ್ದಾನೆ.
ಸ್ಥಳಕ್ಕೆ ಬಂದ ಸ್ಥಳೀಯ ನಿವಾಸಿಗಳು ಬಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಕಪಾಳಮೋಕ್ಷ ಮಾಡಿದ್ದಾರೆ. ಬಾಲಕನಿಗೆ ಕಪಾಳಮೋಕ್ಷ ಮಾಡುವ ವೀಡಿಯೋ ವೈರಲ್ ಆಗಿದೆ. ಈ ಸಂಬಂಧ ಚಾಲಕನ ವಿರುದ್ಧ ಅಹಮದಾಬಾದ್ ಪೊಲೀಸರು ಬಿಎನ್ಎಸ್ ಸೆಕ್ಷನ್ 281, 125(ಎ), ಮತ್ತು ಮೋಟಾರು ವಾಹನ ಕಾಯ್ದೆ ಸೆಕ್ಷನ್ 177, 184, 181 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.













