27.7 C
Sullia
Sunday, March 8, 2026

ಬಿ ಸಿ ರೋಡ್ ನಲ್ಲಿ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ: ಪುತ್ತೂರಿನ ವ್ಯಕ್ತಿಯನ್ನು ವಶಕ್ಕೆ ಪಡೆದು ಕೊಂಡ ಪೊಲೀಸರು

ನ್ಯೂಸ್ ನಾಟೌಟ್ : ಬಿ ಸಿ ರೋಡ್ ನಲ್ಲಿ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆಯಲ್ಲಿ ಪುತ್ತೂರಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬಿಸಿಲೆ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಗಿತ್ತು.ಈ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದರು. ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ಸಮಯ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಿಂದ ಅಂಬ್ಯುಲೆನ್ಸ್ ಮುಂದಿನಿಂದ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡಿತ್ತು.

ಇದೀಗ ಮಹಮ್ಮದ್ ಮನ್ಸೂರು ( 38 ವರ್ಷ) ಬೆಟ್ಟಂಪಾಡಿ ಗ್ರಾಮ ಪುತ್ತೂರು ತಾಲೂಕು ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles