27.7 C
Sullia
Sunday, March 8, 2026

ಕಸಾಪ- ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ- 2025 ಉದ್ಘಾಟನೆ

ನ್ಯೂಸ್ ನಾಟೌಟ್ : ಕನ್ನಡ ಸಾಹಿತ್ಯ ಪರಿಷತ್ತು ಕನ್ನಡವನ್ನು ಬೆಳೆಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಜಗತ್ತಿನಾದ್ಯಂತ ಕನ್ನಡವನ್ನು ಪಸರಿಸುವ ಕೆಲಸವನ್ನು ಮಾಡುತ್ತಿದೆ ಎಂದು ಡಾ.ಯು.ಪಿ.ಶಿವಾನಂದ ಹೇಳಿದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget


ಅವರು ರಂಗಮಯೂರಿ ಕಲಾಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 7 ದಿನಗಳ ಕಾಲ ನಡೆಯಲಿರುವ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ 2025ನ್ನು ಉದ್ಘಾಟಿಸಿ ಮಾತನಾಡಿದರು.ಸುಳ್ಯ ಕಸಾಪ ವತಿಯಿಂದ 7 ದಿನಗಳ ಕಾಲ ಹಮ್ಮಿಕೊಂಡ ಕಾರ್ಯಕ್ರಮ ಶ್ಲಾಘನೀಯ, ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಮತ್ತು ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಮುಖ್ಯ ಅತಿಥಿಯಾಗಿ ಭಾವನಾ ಸುಗಮ ಸಂಗೀತದ ಅಧ್ಯಕ್ಷ ಕೆ.ಆರ್.ಗೋಪಾಲಕೃಷ್ಣ, ಸಂಗೀತ ಶಿಕ್ಷಕಿ ಶ್ರೀಮತಿ ಸುಮನಾ ರಾವ್ ಪುತ್ತೂರು ಭಾಗವಹಿಸಿದ್ದರು.ಕಸಾಪ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷರಾದ ಚಂದ್ರಾವತಿ ಬಡ್ಡಡ್ಕ, ಕಸಾಪ ತಾಲೂಕು ಘಟಕದ ಗೌ.ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ ಮತ್ತು ಚಂದ್ರಮತಿ ಕೆ.,ಗೌ.ಕೋಶಾಧಿಕಾರಿ ದಯಾನಂದ ಆಳ್ವ, ಕಾರ್ಯಕ್ರಮ ಸಂಯೋಜಕ ಮತ್ತು ರಂಗ ಮಯೂರಿಯ ನಿರ್ದೇಶಕ ಲೋಕೇಶ್ ಊರುಬೈಲು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಕಸಾಪ ನಿರ್ದೇಶಕ,ಕಾರ್ಯಕ್ರಮ ಸಂಯೋಜಕ ಕೇಶವ ಸಿ.ಎ.ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಲೋಕೇಶ್ ಊರುಬೈಲು ವಂದಿಸಿದರು.ಕಾರ್ಯಕ್ರಮ ಸಂಯೋಜಕಿ, ಕಸಾಪ ನಿರ್ದೇಶಕಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಗಾಯಕ- ಗಾಯಕಿಯರಿಂದ ಕನ್ನಡ ಗಾನ ಕಲರವ ನಡೆಯಿತು.

Related Articles

LEAVE A REPLY

Please enter your comment!
Please enter your name here

Latest Articles