21.6 C
Sullia
Sunday, March 8, 2026

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಎನ್ನೆಸ್ಸೆಸ್ ಘಟಕದ ವಿಶೇಷ ಶಿಬಿರ ಸಮಾರೋಪ ಸಮಾರಂಭ

ನ್ಯೂಸ್‌ ನಾಟೌಟ್ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಆಯೋಜಿಸಿದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನ. 1 ರಂದು ಆಲೆಟ್ಟಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ (ರಿ.) ಸುಳ್ಯ ಇದರ ಕಾರ್ಯದರ್ಶಿ ಹೇಮನಾಥ ಕೆ.ವಿ., ಶಿಬಿರಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ, ಸಮಯ ಪ್ರಜ್ಞೆ ಹಾಗೂ ಸೇವಾ ಮನೋಭಾವ ಅರಿಯಲು ಇಂತಹ ಎನ್ ಎಸ್ ಎಸ್ ಶಿಬಿರ ಅವಶ್ಯಕ ಎಂದರು.

ಮುಖ್ಯ ಅತಿಥಿಗಳಾಗಿ ಶ್ರೀ ಸದಾಶಿವ ದೇವಸ್ಥಾನ ಆಲೆಟ್ಟಿ ಇದರ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಆಲೆಟ್ಟಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಪಾಶಂಕರ್ ತುದಿಯಡ್ಕ, ರೋಟರಿ ಕ್ಲಬ್ ಸಿಟಿ ಸುಳ್ಯದ ಅಧ್ಯಕ್ಷ ಹೇಮಂತ್ ಕಾಮತ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ವಿನಯ್ ಶಂಕರ್ ಭಾರಧ್ವಾಜ್ ಹಾಗೂ ಎನ್ ಎಸ್ ಎಸ್ ಘಟಕದ ನಾಯಕರಾದ ಸ್ಪಂದ ಹಾಗೂ ಮಿ. ರೋಹನ್ ಎಲ್ ಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಶಿಬಿರದ ತಂಡಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು. ಕಾಲೇಜಿನ ಸಂಹಿತ ಸಿದ್ಧಾಂತ ವಿಭಾಗದ ಪ್ರಾಧ್ಯಾಪಕಿಯಾದ ಡಾ. ದೇವಿಕಾ ಶೆಟ್ಟಿ ಹಾಗೂ ಬಳಗದವರು ಪ್ರಾರ್ಥಿಸಿ, ಶಿಬಿರಾರ್ಥಿಗಳಾದ ಕು. ಐಶ್ವರ್ಯ ಸುಭಾಷ್ ರಾಯ್ಕರ್ ಸ್ವಾಗತಿಸಿ, ಕು. ಅನುಪ್ರಿಯ ಆರ್ ಹಾಗೂ ಚಂದನ್ ಕೆ ಎಲ್ ಕಾರ್ಯಕ್ರಮವನ್ನು ನಿರೂಪಿಸಿ, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಯೋಜನಾಧಿಕಾರಿ ಡಾ. ಪ್ರಮೋದ ಪಿ ಎ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Latest Articles