21.6 C
Sullia
Saturday, March 7, 2026

ಪುತ್ತೂರು: ಕಾರು-ಬಸ್ ಅಪಘಾತ ಪ್ರಕರಣ, ಗಾಯಾಳು ಮಹಿಳೆ ಮೃತಪಟ್ಟ ತಿಂಗಳೊಳಗೆ ಕೊನೆಯುಸಿರೆಳೆದ ತಂದೆ..!

ನ್ಯೂಸ್‌ ನಾಟೌಟ್: ಕಳೆದ ನಾಲ್ಕು ತಿಂಗಳ ಹಿಂದೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪೂರ್ವ ಭಟ್ ಮೃತಪಟ್ಟ ಒಂದು ತಿಂಗಳೊಳಗೆ ಗಾಯಾಳು ತಂದೆಯೂ ನ.3ರಂದು ಮೃತಪಟ್ಟಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೇ 27 ರಂದು ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುರ ಸಮೀಪ ಈ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಅಂಡೆಪುಣಿ ಈಶ್ವರ ಭಟ್ ಅವರ ಮಗಳು ಅಪೂರ್ವ (35) ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಕ್ಟೋಬರ್ 7 ರಂದು ನಿಧನರಾಗಿದ್ದರು. ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಅವರ ತಂದೆ, ಈಶ್ವರ ಭಟ್ (75), ಅವರು ಕೂಡ ನವೆಂಬರ್ 3 ರಂದು ಪುತ್ತೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಪಘಾತ ಸಂಭವಿಸಿದ ದಿನ, ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಅವರು ಪುತ್ತೂರು ಪಟ್ಟಣದಿಂದ ತಮ್ಮ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ, ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮುರ ಸಮೀಪ ಅವರ ಕಾರಿಗೆ ಡಿಕ್ಕಿ ಹೊಡೆದಿತ್ತು. ತಂದೆ ಹಾಗೂ ಮಗಳು ಗಂಭೀರವಾಗಿ ಗಾಯಗೊಂಡರೆ, ಅಪೂರ್ವ ಅವರ 3 ವರ್ಷದ ಮಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಳು. ತಂದೆ ಮತ್ತು ಮಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚೇತರಿಸಿಕೊಂಡಿದ್ದ ಈಶ್ವರ ಭಟ್ ಅವರನ್ನು ಪುತ್ತೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಅಪೂರ್ವ
ಅವರು ಈ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

Related Articles

LEAVE A REPLY

Please enter your comment!
Please enter your name here

Latest Articles