27.7 C
Sullia
Sunday, March 8, 2026

ಹಾಸ್ಟೇಲ್ ನಲ್ಲಿ ವಿದ್ಯಾರ್ಥಿನಿ ನಿಗೂಢ ಸಾವು..! ಟೆರೇಸ್ ಮೇಲೆ ಹೋದಾಕೆ ಶವವಾಗಿ ಪತ್ತೆ..!

ನ್ಯೂಸ್ ನಾಟೌಟ್: ಸರ್ಕಾರಿ ಕಾಲೇಜಿನ ವಸತಿ ನಿಲಯದಲ್ಲಿ ಟೆರೇಸ್ ಮೇಲೆ ಹೋದ 21 ವರ್ಷದ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಮೃತಪಟ್ಟ ಘಟನೆ ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕೀಯರ ವಸತಿ ನಿಲಯದಲ್ಲಿ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ವನಿಷಾ ಎಂದು ಗುರುತಿಸಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಭದ್ರಾವತಿ ತಾಲೂಕು ಗಂಗೂರಿನ ವನಿಷಾ ಶಿವಮೊಗ್ಗದ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಪ್ರತಿಭಾವಂತ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿದ್ದ ಈಕೆ ತರಗತಿಯಲ್ಲಿ ಚುರುಕಿನ ವಿದ್ಯಾರ್ಥಿನಿಯಾಗಿದ್ದಳು. ಹಾಸ್ಟೆಲ್ನಲ್ಲಿ ಎಲ್ಲರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಳು. ಇತರ ವಿದ್ಯಾರ್ಥಿನಿಯರ ಜೊತೆಗೆ ಇದ್ದ ವನಿಷಾ ಕೆಲ ಹೊತ್ತಲ್ಲಿ ನಾಪತ್ತೆಯಾಗಿದ್ದಳು. ಹಾಸ್ಟೆಲ್ ಟರೇಸ್ ಮೇಲೆ ಹೋದ ವನಿಷಾ ಟ್ಯಾಂಕ್ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ವನಿಷಾ ಹಾಸ್ಟೆಲ್ ಟೆರೇಸ್ ಮೇಲೆ ತೆರಳಿ ಬದುಕು ಅಂತ್ಯಗೊಳಿಸಿದ್ದಾಳೆ. ಟೆರೇಸ್ ಮೇಲೆ ಹೋದ ಇತರ ವಿದ್ಯಾರ್ಥಿನಿಯರು ವನಿಷಾ ಮೃತದೇಹ ನೋಡಿ ಬೆಚ್ಚಿ ಬಿದ್ದಿದ್ದಾರೆ. ತಕ್ಷಣವೇ ವಾರ್ಡನ್ ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಾರ್ಡನ್, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೋಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Latest Articles