21.6 C
Sullia
Sunday, March 8, 2026

ಸುಳ್ಯ: ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಅಗ್ನಿ ಸುರಕ್ಷತಾ ಮಾಹಿತಿ ಕಾರ್ಯಾಗಾರ ಮತ್ತು ಪ್ರಾತ್ಯಕ್ಷಿಕೆ

ನ್ಯೂಸ್‌ ನಾಟೌಟ್: ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ನ. 6 ರಂದು ಕಾಲೇಜಿನ ರೆಡ್ ಕ್ರಾಸ್ ಘಟಕದ ವತಿಯಿಂದ ಅಗ್ನಿಸುರಕ್ಷತಾ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಅಗ್ನಿ ಅವಘಡ ಮತ್ತು ಸುರಕ್ಷತೆಯ ಬಗ್ಗೆ ಕೆ.ವಿ.ಜಿ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಗ್ನಿ ಸುರಕ್ಷತಾ ವಿಭಾಗದ ಅಧಿಕಾರಿ, ಮದನ್ ಧರ್ಮ ರವರು ಸಂಪೂರ್ಣ ಮಾಹಿತಿ ನೀಡಿದರು. ಕಾಲೇಜಿನ ಪ್ರಾoಶುಪಾಲೆ ಟೀನಾ ಎಚ್ ಎಸ್, ಆಡಳಿತಾಧಿಕಾರಿ ಪ್ರೊ. ಕೆ ವಿ. ದಾಮೋದರ ಗೌಡ, ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹ ಸಂಯೋಜಕಿ ಶರ್ಮಿಳ ಬಿ ರೈ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಪ್ರಲೋಕ್ಷ ಹಾಗೂ ಶ್ವೇತಲ್ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಚಂದನ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ವಿಜಯ್ ಕೆ.ವಂದಿಸಿದರು. ಗಾನಶ್ರೀ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು , ವಿದ್ಯಾರ್ಥಿಗಳು ಭಾಗವಹಿಸಿ ಅಗ್ನಿ ಸುರಕ್ಷತೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಪ್ರಾತ್ಯಕ್ಷಿಕೆಯಲ್ಲಿ ತೊಡಗಿಕೊಂಡರು.

Related Articles

LEAVE A REPLY

Please enter your comment!
Please enter your name here

Latest Articles