ನ್ಯೂಸ್ ನಾಟೌಟ್: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಆರೋಪಿ ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. 20ರಿಂದ 25 ವಯಸ್ಸಿನ ಯುವಕರು ಈ ದಂಧೆಯಲ್ಲಿ ನಿರತರಾಗಿದ್ದು, ಊರಿನ 150 ಮಂದಿ ಯುವಕರು ಸೈಬರ್ ಅಪರಾಧದಲ್ಲೇ ತೊಡಗಿಗೊಂಡಿರುವ ಆಘಾತಕಾರಿ ವಿಷಯ ಈ ವೇಳೆ ಬೆಳಕಿಗೆ ಬಂದಿದೆ. ಸದ್ಯ ಆರೋಪಿ ವಿಕಾಸ್ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.













