ನ್ಯೂಸ್ ನಾಟೌಟ್: ಕಳೆದ ಕೆಲವು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆಂಬ ಸುದ್ದಿ ಹರಡಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆ ನಡೆದಿದೆ. ಕೈದಿಗಳು ಜೈಲಿನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ರೌಡಿ ಶೀಟರ್ ಸೀನಾ ಎನ್ನುವಾತನ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು. ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್ಐಆರ್ ದಾಖಲಾಗಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಘಟನೆಗೆ ಸಂಬಂಧಿಸಿದಂತೆ ಆಂತರಿಕ ತನಿಖೆ ಆರಂಭವಾಗಿದೆ. ಮೊಬೈಲ್ ಫೋನ್ ಬಳಸಿದ್ದ ಆರೋಪದ ಹಿನ್ನೆಲೆಯಲ್ಲಿ ಕೈದಿಗಳಾದ ತರುಣ್ ಕೊಂಡೂರು, ಸೀರಿಯಲ್ ಕಿಲ್ಲರ್ ಉಮೇಶ್ ರೆಡ್ಡಿ ಹಾಗೂ ಜುಹಾದ್ ಹಮೀದ್ ಶಕೀಲ್ ರನ್ನು ಜೈಲು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳು ಮೊಬೈಲ್ ಬಳಕೆ ಹಾಗೂ ಜೈಲಿನೊಳಗಿನ ಬಿಂದಾಸ್ ಜೀವನಶೈಲಿ ಬಗ್ಗೆ ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.













