27.7 C
Sullia
Sunday, March 8, 2026

ಮಡಿಕೇರಿ: ನವಜಾತ ಶಿಶುವಿನ ಮೃತದೇಹ ಪತ್ತೆ,ಮೃತಪಟ್ಟ ಮಗು ಯಾರದ್ದು ಅನ್ನೋದರ ಬಗ್ಗೆ ವಿಚಾರಣೆ

ನ್ಯೂಸ್ ನಾಟೌಟ್ :ಮಡಿಕೇರಿ ಸಮೀಪದ ಅರಣ್ಯ ಭವನದ (Aranya Bhavan) ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಶಿಶುವಿನ ಜನನವಾಗಿ ಎರಡು ವಾರಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮಡಿಕೇರಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಡೆಸಲು ಮುಂದಾಗಿದ್ದಾರೆ.

ಸದ್ಯ ಮಡಿಕೇರಿ ನಗರ ಠಾಣಾ ಪೊಲೀಸ್, ಶಿಶು ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಶಿಶುವಿನ ಮೃತದೇಹವನ್ನ ಮಡಿಕೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಅಲ್ಲದೇ ಮೃತಪಟ್ಟ ಮಗು ಯಾರದ್ದು ಅನ್ನೋದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles