ನ್ಯೂಸ್ ನಾಟೌಟ್ : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ.
ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಬಳಿ ಸಾಲುಮರಗಳನ್ನು ಬೆಳೆಸಿದ್ದರು.
ಸಾಲುಮರದ ತಿಮ್ಮಕ್ಕ ಅವರಿಗೆ ಮಕ್ಕಳಿರಲಿಲ್ಲ. ರಸ್ತೆ ಬದಿಯಲ್ಲಿ ಕಿಲೋಮೀಟರ್ ಗಟ್ಟಲೇ ಗಿಡಗಳನ್ನು ನೆಟ್ಟು ನಿತ್ಯ ನೀರು ಹಾಕಿ ಮರಗಳಾಗುವಂತೆ ಬೆಳೆಸಿದ್ದರು. ಮರಗಳನ್ನೇ ಮಕ್ಕಳಂತೆ ನೋಡಿಕೊಂಡಿದ್ದರು. ಇದರಿಂದಾಗಿ ತಿಮ್ಮಕ್ಕ ಅವರಿಗೆ ಸಾಲುಮರದ ತಿಮ್ಮಕ್ಕ ಎಂಬ ಹೆಸರೇ ಬಂದಿತ್ತು.
ಸಾಲುಮರದ ತಿಮ್ಮಕ್ಕ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪುರಸ್ಕಾರ ಪಡೆದಾಗ ಆಗಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನು ಆಶೀರ್ವದಿಸಿದ್ದರು.













