21.6 C
Sullia
Sunday, March 8, 2026

ನಂದಿನಿ ತುಪ್ಪ ಪ್ರಿಯರಿಗೆ ಶಾಕಿಂಗ್ ನ್ಯೂಸ್!!ಬೆಂಗಳೂರಿನಲ್ಲಿ ನಕಲಿ ನಂದಿನಿ!,8 ಸಾವಿರ ಲೀಟರ್ ತುಪ್ಪ ಸೀಜ್!

ನ್ಯೂಸ್ ನಾಟೌಟ್ : ನಂದಿನಿ ತುಪ್ಪ ಪ್ರಿಯರಿಗೆ ಶಾಕಿಂಗ್ ನ್ಯೂಸ್ ,ಬೆಂಗಳೂರು  ನಗರದಲ್ಲಿ ನಕಲಿ ನಂದಿನಿ ತುಪ್ಪ ಮಾರಾಟವಾಗುತ್ತಿದೆ. ಇದೀಗ ಜಾಲ ಪತ್ತೆಯಾಗಿದ್ದು, ಪೊಲೀಸರು 1.5 ಕೋಟಿ ರೂ. ಮೌಲ್ಯದ 8 ಸಾವಿರ ಲೀಟರ್ ತುಪ್ಪವನ್ನು ಸೀಜ್ ಮಾಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಈ ಸಂಬಂಧ ಕೆಎಂಎಫ್ (KMF) ಡಿಸ್ಟ್ರಿಬ್ಯೂಟರ್ ಮಹೇಂದ್ರ, ಪುತ್ರ ದೀಪಕ್, ಸಪ್ಲೈರ್‌ಗಳಾದ ಮುನಿರಾಜು ಹಾಗೂ ಅಭಿ ಅರಸು ಎಂಬ ನಾಲ್ವರ ಗ್ಯಾಂಗ್‌ನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಸೇರಿಕೊಂಡು ಬೆಂಗಳೂರಿನಲ್ಲಿದ್ದ ನಂದಿನಿ ಪಾರ್ಲರ್‌ಗಳಿಗೆ ನಕಲಿ ತುಪ್ಪವನ್ನು ಸರಬರಾಜು ಮಾಡುತ್ತಿದ್ದರು. ಹೊರ ರಾಜ್ಯದಲ್ಲಿ ಕಲಬೆರಕೆ ತುಪ್ಪವನ್ನು ತಯಾರಿಸಿ, ಪ್ಯಾಕೆಟ್ ಹಾಗೂ ಪ್ಲ್ಯಾಸ್ಟಿಕ್‌ ಬಾಟಲ್‌ನಲ್ಲಿ ಸಪ್ಲೈ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.ಓರ್ವ ತಯಾರಿಸಿದ ತುಪ್ಪವನ್ನು ತಮಿಳುನಾಡಿನಿಂದ ಸಪ್ಲೈ ಮಾಡಿದರೆ, ಇನ್ನೋರ್ವ ಅದನ್ನು ಬೆಂಗಳೂರಿಗೆ ಕಳುಹಿಸುತ್ತಿದ್ದ ಎಂದು ತಿಳಿದು ಬಂದಿದೆ.

Related Articles

LEAVE A REPLY

Please enter your comment!
Please enter your name here

Latest Articles