ನ್ಯೂಸ್ ನಾಟೌಟ್ : ಕಾಡಂಚಿನ ಗ್ರಾಮಗಳಿಗೆ ಬರೋಬರಿ 21 ಹುಲಿಗಳು ಎಂಟ್ರಿಯಾಗಿರುವ ಘಟನೆ ಮೈಸೂರು ಜಿಲ್ಲೆಯಿಂದ ವರದಿಯಾಗಿದೆ.
ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದ್ದು, ಮೂವರು ರೈತರು ಬಲಿಯಾದ ಘಟನೆ ಕೂಡ ನಡೆದಿತ್ತು. ಈ ಬೆನ್ನಲ್ಲೇ ಅರಣ್ಯ ಇಲಾಖೆ ಜನರನ್ನ ಕಾಡಿದ್ದ ಹುಲಿಯನ್ನ ಸೆರೆಹಿಡಿದಿತ್ತು. ಜೊತೆಗೆ ಕಾಡಂಚಿನ ರೈತರ ರಕ್ಷಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿತ್ತು. ಈ ನಡುವೆ ಬರೋಬ್ಬರಿ 21 ಹುಲಿಗಳು ಎಂಟ್ರಿ ಕೊಟ್ಟಿವೆ. ಡಿಸಿಎಫ್ (Mysuru DCF) ಪರಮೇಶ್ ಈ ಬಗ್ಗೆ ಅಧಿಕೃತ ಮಾಹಿತಿ ಕೊಟ್ಟಿದ್ದಾರೆ.
ಒಟ್ಟು 26 ಹುಲಿಗಳು ಕಾಡಿನಿಂದ ನಾಡಿಗೆ ಬಂದಿದ್ದವು. ಅದರಲ್ಲಿ ಐದು ಹುಲಿಯನ್ನು ಹಿಡಿಯಲಾಗಿದೆ. ಇನ್ನೂ 21 ಹುಲಿ ನಾಡಿನಲ್ಲೇ ಓಡಾಡುತ್ತಿವೆ. ಹೀಗಾಗಿ ಜನರು ಕೂಡ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ ಎಂದು ಡಿಸಿಎಫ್ ಪರಮೇಶ್ ಹೇಳಿದ್ದಾರೆ.













