21.6 C
Sullia
Sunday, March 8, 2026

ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ; ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಮೂವರು ಸಾವು

ನ್ಯೂಸ್ ನಾಟೌಟ್ : ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ರಮ್ಯ(23), ರವಿ‌(64), ನಂಜಮ್ಮ(75) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಎಂಬ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಿಸಿರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ‌ ಸರ್ಕಲ್ ಅವೈಜ್ಞಾನಿಕವಾಗಿರುವುದರಿಂದಲೇ ಈ ಅಪಘಾತ ಸಂಭವಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

LEAVE A REPLY

Please enter your comment!
Please enter your name here

Latest Articles