21.6 C
Sullia
Sunday, March 8, 2026

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ , ವಾಣಿಜ್ಯ ಸಂಘಟನೆ ಮತ್ತು ಐಕ್ಯುಎಸಿ (IQAC) ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜು ಸಭಾಂಗಣದಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವಕೀಲ ರಂಜಿತ್ ಕುಕ್ಕೆಟ್ಟಿ ಸುಳ್ಯ ಮಾತನಾಡಿ, ಹಿಂದುಳಿದ ಜಾತಿ, ಹಿಂದುಳಿದ ವರ್ಗ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ಸಿಗುವ ಕಾನೂನು ನೆರವಿನ ಬಗ್ಗೆ ಹಾಗೂ ಜನ ಸಾಮಾನ್ಯರಿಗೆ ನೀಡಲಾಗುವ ಕಾನೂನು ಅರಿವು ಕಾರ್ಯಕ್ರಮಗಳು ಮತ್ತು ನ್ಯಾಯಾಲಯಗಳಲ್ಲಿ ಶೀಘ್ರ ಇತ್ಯರ್ಥಕ್ಕಾಗಿ ಇರುವ ಲೋಕ ಅದಾಲತ್ ಬಗ್ಗೆ ವಿವರಿಸಿದರು.

ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ,ವಾಣಿಜ್ಯ ಸಂಘದ ಸಂಯೋಜಕಿ ದಿವ್ಯಾ ಟಿ.ಎಸ್, ಐಕ್ಯುಎಸಿ ಸಂಯೋಜಕರಾದ ಡಾ. ಮಮತಾ ಕೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಬಿ. ಕಾಂ ವಿದ್ಯಾರ್ಥಿನಿ ರಕ್ಷಾ ಸ್ವಾಗತಿಸಿ ವಿದ್ಯಾರ್ಥಿ ನವನೀತ ದ್ವಿತೀಯ ಬಿಕಾಂ ವಂದಿಸಿದರು. ಪ್ರಥಮ ಬಿ ಕಾಂ ವಿದ್ಯಾರ್ಥಿನಿಯಾದ ಎಂ ಅರ್ಶಿದ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ವಿ ಹಾಗೂ ಗೀತಾ ಶೆಣೈ ಮತ್ತು ವಿಭಾಗದ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಸಹಕರಿಸಿದರು.

Related Articles

LEAVE A REPLY

Please enter your comment!
Please enter your name here

Latest Articles