37.4 C
Sullia
Sunday, March 8, 2026

ಮಂತ್ರಾಲಯ ರಾಯರ ಮಠದ ಹುಂಡಿ ಹಣ ಎಣಿಕೆ ಮುಕ್ತಾಯ; 34 ದಿನದಲ್ಲಿ ದಾಖಲೆಯ 5.41 ಕೋಟಿ ಕಾಣಿಕೆ ಸಂಗ್ರಹ!

ನ್ಯೂಸ್ ನಾಟೌಟ್ : ಅತಿ ಹೆಚ್ಚು ಭಕ್ತರನ್ನು ಕೈ ಬೀಸಿ ಕರೆಯುತ್ತಿರುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದೆ. ಕಳೆದ 34 ದಿನದಲ್ಲಿ ಬರೋಬ್ಬರಿ 5.41 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಕಾರ್ತಿಕ ಮಾಸ ಹಿನ್ನೆಲೆ ಮಠಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು. ಈ ವೇಳೆ ಮಠಕ್ಕೆ ಕೋಟ್ಯಾಂತರ ರೂಪಾಯಿ ಕಾಣಿಕೆ ಬಂದಿದೆ. ಸಂಗ್ರಹವಾದ ಕಾಣಿಕೆಯಲ್ಲಿ 5,26,89,128 ರೂ. ಕರೆನ್ಸಿ ನೋಟುಗಳು, 14,58,100 ರೂಪಾಯಿ ನಾಣ್ಯಗಳು ಸಂಗ್ರಹವಾಗಿವೆ. 80 ಗ್ರಾಂ ಚಿನ್ನ, 1,610 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ತಿಳಿದು ಬಂದಿದೆ.ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Latest Articles