ನ್ಯೂಸ್ ನಾಟೌಟ್ : ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಕಾರು ಡಿವೈಡರ್ಗೆ ಡಿಕ್ಕಿಯಾಗಿ (Accident) ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ.
ಮೃತರನ್ನು ಚನೈ ಮೂಲದ ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕರನ್ನು ಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.













